ಸೆ. 4 : ಕ್ರೈಸ್ಟ್‌ಕಿಂಗ್‌ ಎಜುಕೇಶನ್ ಟ್ರಸ್ಟ್‌ ವತಿಯಿಂದ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

ಕಾರ್ಕಳ : ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ಹಾಗೂ ಕ್ರೈಸ್ಟ್‌ಕಿಂಗ್‌ ಎಜುಕೇಷನ್ ಟ್ರಸ್ಟ್‌ ವತಿಯಿಂದ ಕೊಡ ಮಾಡುವ ಜಿಲ್ಲಾ ಮಟ್ಟದ ಪ್ರಶಸ್ತಿಗಳಾದ ಕ್ರೈಸ್ಟ್‌ಕಿಂಗ್‌ ಶಿಕ್ಷಕ ರತ್ನ ಹಾಗೂ ಕ್ರೈಸ್ಟ್‌ಕಿಂಗ್‌ ಕ್ರೀಡಾ ಶಿಕ್ಷಕ ಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಸರಕಾರಿ ಪ್ರೌಢಶಾಲೆ ರೆಂಜಾಳ ಇಲ್ಲಿನ ಮುಖ್ಯ ಶಿಕ್ಷಕಿ ಸ್ವರ್ಣಲತಾ ಕೆ. ಇವರು ಈ ಸಾಲಿನ ಕ್ರೈಸ್ಟ್‌ಕಿಂಗ್‌ ಶಿಕ್ಷಕ ರತ್ನ ಪ್ರಶಸ್ತಿಗೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕೊಡ ಮಾಡುವ ಕ್ರೈಸ್ಟ್‌ಕಿಂಗ್‌ ಕ್ರೀಡಾ ಶಿಕ್ಷಕ ಶ್ರೀ ಪ್ರಶಸ್ತಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ನಿವೃತ್ತ ಯೋಧ ಫ್ರೆಡ್ರಿಕ್ ರೆಬೆಲ್ಲೊ ಅವರು ಆಯ್ಕೆಯಾಗಿದ್ದಾರೆ.

ಸೆ. 4ರಂದು ಸಂಸ್ಥೆಯಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸದಸ್ಯ ಎಸ್. ಎಲ್. ಭೋಜೆಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕ ಲೋಕೇಶ್ ಸಿ. ಹಾಗೂ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ, ಮಿಯ್ಯಾರು ಸಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸಂಜೀವ ದೇವಾಡಿಗ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.























































































































error: Content is protected !!
Scroll to Top