ಧರ್ಮಸ್ಥಳ ಪ್ರಕರಣದಲ್ಲಿ ಸಸಿಕಾಂತ್ ಸೆಂಥಿಲ್ ‌ಹೆಸರು

ಬೆಂಗಳೂರು : ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಸೆಂಥಿಲ್‌ ಹೇಳಿದ್ದಾರೆ. 42 ಎಸಿಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪಿಸಿಆರ್ ಫೈಲ್‌ ಮಾಡಿದ್ದು, ಸೆಪ್ಟೆಂಬರ್‌ 11ಕ್ಕೆ ವಿಚಾರಣೆ ನಡೆಯಲಿದೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೆಂಥಿಲ್, ಈಗ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಹಿಂದಿನ ಚಿತ್ರಕಥೆಗಾರ ಮತ್ತು ಮಾಸ್ಟರ್ ಮೈಂಡ್ ಎಂದು ತಮ್ಮನ್ನು ತಪ್ಪಾಗಿ ಬಿಂಬಿಸಲಾಗಿದೆ. ಆರಂಭದಲ್ಲಿ, ನಾನು ಈ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದ್ದೆ. ಜನಾರ್ದನ ರೆಡ್ಡಿಯವರು ಆರೋಪ ಮಾಡಿದ ಸಂದರ್ಭದಲ್ಲಿ ನಾನು ಸಂಸತ್ತು ಅಧಿವೇಶನದಲ್ಲಿ ಭಾಗಿಯಾಗಿದ್ದೆ. ಅವರ ಆರೋಪಗಳು ಬಾಲಿಶವಾಗಿವೆ. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದರ ನಂತರ ಒಂದರಂತೆ ತಮ್ಮ ವಿರುದ್ಧ ಸುಳ್ಳು ಕಥೆಗಳನ್ನು ಹೆಣೆಯುತ್ತಿದ್ದಾರೆ. ನೋಡಿ ಸುಮ್ಮನೆ ಕೂರದೆ ಕಾನೂನುಬದ್ಧವಾಗಿ ಪ್ರಶ್ನಿಸಲು ಮುಂದಾಗಿದ್ದೇನೆ ಎಂದು ಹೇಳಿದರು.

ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಯಾಗಿ ತಮ್ಮ ಕ್ಲೀನ್ ಟ್ರ್ಯಾಕ್ ರೆಕಾರ್ಡ್ ನ್ನು ನೆನಪಿಸಿಕೊಂಡ ಸೆಂಥಿಲ್, ಶಾಸಕ ಜನಾರ್ದನ ರೆಡ್ಡಿಯವರು ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡಿದ್ದಾರೆ ಮತ್ತು ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ಕೆಟ್ಟ ಇಮೇಜ್ ತಂದಿದ್ದಾರೆ, ಇಂಥವರು ನನ್ನ ಮೇಲೆ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಕೇಳಿದರು.
ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರು ತಮ್ಮ ಹೆಸರನ್ನು ಎಳೆದು ತರುತ್ತಿರುವ ಬಗ್ಗೆ ಸ್ಪಷ್ಟೀಕರಣ ಕೋರಿ ನ್ಯಾಯಾಲಯದ ಮುಂದೆ ದೂರು ದಾಖಲಿಸಿದ್ದೇನೆ, ಕೋರ್ಟ್‌ನಲ್ಲಿ ಅವರು ಉತ್ತರಿಸಲಿ ಎಂದರು.

ಜನಾರ್ಧನ ರೆಡ್ಡಿ ಆರೋಪ ಏನು?
ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು.





























































































































error: Content is protected !!
Scroll to Top