ಸೆ. 9ರಂದು ಉಪ ರಾಷ್ಟ್ರಪತಿ ಚುನಾವಣೆ

ದೆಹಲಿ : ಉಪರಾಷ್ಟ್ರಪತಿ ಚುನಾವಣೆಯು ಸೆ. 09ರಂದು ನಡೆಯಲಿದೆ. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಹಾಗೂ ಇಂಡಿ ಒಕ್ಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾ. ಬಿ. ಸುದರ್ಶನ್ ರೆಡ್ಡಿ ಕಣದಲ್ಲಿದ್ದಾರೆ.
ರಾಧಾಕೃಷ್ಣನ್ ತಮಿಳುನಾಡಿನವರಾಗಿದ್ದರೆ, ರೆಡ್ಡಿ ತೆಲಂಗಾಣದವರಾಗಿರುವುದರಿಂದ ಉಪರಾಷ್ಟ್ರಪತಿ ಸ್ಥಾನಕ್ಕೆ ದಕ್ಷಿಣದವರ ನಡುವೆಯೇ ಪೈಪೋಟಿ ಏರ್ಪಟ್ಟಿದೆ. ಇಂದು ಮತದಾನ ಪ್ರಕ್ರಿಯೆ ಕುರಿತು ತರಬೇತಿ ನೀಡಲಾಗುತ್ತಿದೆ.

ಬಿಜೆಪಿ ನಾಯಕ ಮತ್ತು ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿರುವ ರಾಧಾಕೃಷ್ಣನ್, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೊಂದಿಗೆ ದೀರ್ಘಕಾಲದಿಂದ ಸಂಬಂಧ ಹೊಂದಿದ್ದಾರೆ ಮತ್ತು 2004 ರಿಂದ 2007 ರವರೆಗೆ ತಮಿಳುನಾಡಿನಲ್ಲಿ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಸುದರ್ಶನ್ ರೆಡ್ಡಿ, ನೈತಿಕ ಜವಾಬ್ದಾರಿ ಮತ್ತು ರಾಷ್ಟ್ರದ ಮೇಲಿನ ಪ್ರೀತಿಯಿಂದ ವರ್ತಿಸುವಂತೆ ಸಂಸದರಿಗೆ ಮನವಿ ಮಾಡಿದ್ದಾರೆ.

ರಾಜ್ಯಸಭೆಯ 233 ಚುನಾಯಿತ ಸದಸ್ಯರು, ರಾಜ್ಯಸಭೆಯ 12 ನಾಮನಿರ್ದೇಶಿತ ಸದಸ್ಯರು ಮತ್ತು ಲೋಕಸಭೆಯ 543 ಚುನಾಯಿತ ಸದಸ್ಯರು ಸೇರಿದಂತೆ ಉಭಯ ಸದನಗಳ ಒಟ್ಟು 788 ಸದಸ್ಯರು ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ.

ಎಲ್ಲಾ ಮತದಾರರು ಸಂಸತ್ತಿನ ಉಭಯ ಸದನಗಳ ಸದಸ್ಯನಾಗಿ ಇರುವುದರಿಂದ, ಪ್ರತಿಯೊಬ್ಬ ಸದಸ್ಯರ ಮತದ ಮೌಲ್ಯವು ಒಂದೇ ಆಗಿರುತ್ತದೆ. ಅಂದರೆ 1 (ಒಂದು) ಎಂದು ಚುನಾವಣಾ ಆಯೋಗ ಹೇಳಿದೆ. ಸಂವಿಧಾನದ ಪರಿಚ್ಛೇದ 66 (1) ರ ಪ್ರಕಾರ, ಒಂದೇ ಬಾರಿ ವರ್ಗಾವಣೆ ಮಾಡಬಹುದಾದ ಮತದ ಮೂಲಕ ಅನುಪಾತದ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ಚುನಾವಣೆಯನ್ನು ನಡೆಸಬೇಕು. ಅಂತಹ ಚುನಾವಣೆಯಲ್ಲಿ ಮತದಾನವು ರಹಸ್ಯ ಮತದಾನದ ಮೂಲಕ ನಡೆಯುತ್ತದೆ.

ಸಂಸದರು ತಮ್ಮ ಮತಗಳನ್ನು ಸರಿಯಾಗಿ ಚಲಾಯಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ತಾಂತ್ರಿಕ ದೋಷಗಳನ್ನು ತಪ್ಪಿಸಲು ತರಬೇತಿ ನೀಡಲು ಪ್ರಾರಂಭಿಸಿದೆ. ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದವರಿಗೆ ಮತದಾನ ಪ್ರಕ್ರಿಯೆಯಲ್ಲಿ ಸಂಪೂರ್ಣ ತರಬೇತಿ ನೀಡಲಾಗುತ್ತದೆ ಮತ್ತು ರಹಸ್ಯ ಮತಪತ್ರಗಳನ್ನು ಹೇಗೆ ನಿರ್ವಹಿಸುವುದು ಎಂಬುದನ್ನು ಕಲಿಸಲಾಗುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.









































































































error: Content is protected !!
Scroll to Top