ಮಂಗಳೂರು : ರಸ್ತೆ ಗುಂಡಿಗೆ ಬಿದ್ದ ಸ್ಕೂಟಿ ಸವಾರೆ ಮೇಲೆ ಕ್ಯಾಂಟರ್ ಲಾರಿ ಹರಿದು, ಮಹಿಳೆ ಮೃತಪಟ್ಟಿರುವ ದುರ್ಘಟನೆ ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ನಡೆದಿದೆ.
ಉಡುಪಿಯ ಪರ್ಕಳ ಮೂಲದ ಮಾಧವಿ ಮೃತ ಮಹಿಳೆ.
ಮಂಗಳೂರಿನ ಎ.ಜೆ.ಆಸ್ಪತ್ರೆಯ ಸಿಬ್ಬಂದಿಯಾಗಿರುವ ಮಾಧವಿ, ಕರ್ತವ್ಯಕ್ಕೆ ಹಾಜರಾಗಲು ಸ್ಕೂಟಿಯಲ್ಲಿ ಆಗಮಿಸುತ್ತಿದ್ದರು. ಸ್ಕೂಟಿ ರಸ್ತೆ ಹೊಂಡಕ್ಕೆ ಬಿದ್ದ ಪರಿಣಾಮ ಮಾಧವಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.






















