ಬೋರ್ಡ್‌ ಕಾಲೇಜಿನಲ್ಲಿ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ )ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ ಸೆ. 9ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.

ಅಮ್ಮ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅವಿನಾಶ್ ಶೆಟ್ಟಿ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿದರು. ಪ್ರಾಂಶುಪಾಲೆ ಅನ್ನಪೂರ್ಣ ಕಾಮತ್, ಸಿಬಿಸಿ ಉಪಾಧ್ಯಕ್ಷ ಇಡ್ಯಾ ಜನಾರ್ಧನ್, ಕಾರ್ಕಳ ತಾಲೂಕು ಮಟ್ಟದ ಪಂದ್ಯಾಟ ನಿರ್ವಾಹಕ, ಬೈಲೂರು ಸ. ಪ. ಪೂ.ಕಾಲೇಜು ಪ್ರಾಂಶುಪಾಲ ಸೀತಾರಾಮ್ ಭಟ್, ಪಂದ್ಯಾಟ ನಿರ್ವಾಹಕ ಶರತ್ ರಾವ್, ಸಿಬಿಸಿ ಕೋಶಾಧಿಕಾರಿ ನಿತ್ಯಾನಂದ ಪೈ, ಸದಸ್ಯರಾದ ವಿಜಯ ಶೆಟ್ಟಿ, ಶ್ರೀನಿವಾಸ ಕಾರ್ಲ ಉಪಸ್ಥಿತರಿದ್ದರು. ಭೌತಶಾಸ್ತ್ರ ಉಪನ್ಯಾಸಕ ಸದಾನಂದ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಕ್ರೀಡಾ ಸಂಚಾಲಕಿ ಶೈಲಜಾ ವಂದಿಸಿದರು.
ಸಾಯಂಕಾಲ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಬಾಲಕರ ವಿಭಾಗದಲ್ಲಿ ಸ. ಪ. ಪೂ. ಕಾಲೇಜು ಬೈಲೂರು ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಫ್ಯಾನಿ ಜೋಯ್ಸ್ ಕಾರ್ಯಕ್ರಮ ನಿರೂಪಿಸಿದರು.

























































































































error: Content is protected !!
Scroll to Top