ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯಂಗವಾಗಿ ಸೇವಾ ಪಾಕ್ಷಿಕ ಅಭಿಯಾನ

ಕಾರ್ಕಳ : ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ಬಿಜೆಪಿಯಿಂದ ದೇಶಾದಾದ್ಯಂತ ʼಸೇವಾ ಪಾಕ್ಷಿಕʼ ಸಾಮಾಜಿಕ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆ. 17 ರಿಂದ ಮಹಾತ್ಮ ಗಾಂಧಿ ರವರ ಜನ್ಮದಿನವಾದ ಅ. 2 ರವರೆಗೆ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದೆ. ಇದರ ಅಂಗವಾಗಿ ಸೆ. 11ರಂದು ಕಾರ್ಕಳ ಮಂಡಲ ಬಿಜೆಪಿ ವತಿಯಿಂದ ಕಾರ್ಯಾಗಾರ ನಡೆಯಿತು.

ಸೇವಾ ಪಕ್ಷಿಕಾ ಅಭಿಯಾನವು ಸೆ. 17 ರಿಂದ ಅ. 2 ರವರೆಗೆ ದೇಶವ್ಯಾಪಿಯಾಗಿ ನಡೆಯಲಿರುವ ಸೇವಾ ಕಾರ್ಯಕ್ರಮಗಳ ಸರಣಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಜೊತೆಗೆ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಸ್ಮರಿಸುವ ಉದ್ದೇಶ ಹೊಂದಿದೆ. ʼಸೇವೆ, ಸುಶಾಸನ ಮತ್ತು ಗರೀಬ್ ಕಲ್ಯಾಣʼ ಎಂಬ ಪಕ್ಷದ ಪ್ರಮುಖ ತತ್ವದ ಆಧಾರದ ಮೇಲೆ ʼಸೇವೆ ಪರಮ ಧರ್ಮʼ ಎಂಬ ಮನೋಭಾವದಿಂದ ಅಭಿಯಾನದಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ. ಆದ್ದರಿಂದ ಕಾರ್ಕಳ ಮಂಡಲದ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದರು.

ಕಾರ್ಯಾಗಾರದಲ್ಲಿ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮುಖಂಡರಾದ ಮಣಿರಾಜ್ ಶೆಟ್ಟಿ, ಸೇವಾ ಪಾಕ್ಷಿಕಾದ ಮಂಡಲ ಸಂಚಾಲಕರಾದ ರವೀಂದ್ರ ಕುಮಾರ್, ಪ್ರವೀಣ್ ಸಾಲಿಯಾನ್, ವಿವಿಧ ಶಕ್ತಿಕೇಂದ್ರಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ ಸ್ವಾಗತಿಸಿದರು, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.









error: Content is protected !!
Scroll to Top