ರಸ್ತೆ ಗುಂಡಿ ಮುಚ್ಚಲು ಅನುದಾನಕ್ಕಾಗಿ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ ಶಾಸಕ ಸುನಿಲ್‌ ಕುಮಾರ್

ಉಡುಪಿ : ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಗೀಡಾಗಿದ್ದು, ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ರಸ್ತೆಗುಂಡಿಗಳು ವಾಹನ ಅಪಘಾತಕ್ಕೂ ಕಾರಣವಾಗುತ್ತಿದ್ದೆ. ಹೀಗಾಗಿ ರಸ್ತೆ ಗುಂಡಿ ಮುಚ್ಚಲು ಶೀಘ್ರವಾಗಿ ಸರಕಾರದಿಂದ ಅನುದಾನ ಬಿಡುಗಡೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಮನವಿ ಮಾಡಿಕೊಂಡಿದ್ದಾರೆ.
ಸೆ. 12ರಂದು ಕಾರ್ಕಳ ತಾಲೂಕು ನೀರೆ ಪಂಚಾಯತ್‌ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ ಎರಡು ವರ್ಷಗಳಿಂದ ಯಾವೊಂದು ಅಭಿವೃದ್ಧಿ ಕಾರ್ಯಕ್ಕೂ ಸರಕಾರ ಅನುದಾನ ನೀಡುತ್ತಿಲ್ಲ. ಹೊಸ ರಸ್ತೆ ನಿರ್ಮಾಣಕ್ಕೆ ಅಲ್ಲದೇ ಹೋದರೂ ಕನಿಷ್ಠ ಪಕ್ಷ ರಸ್ತೆ ಗುಂಡಿ ಮುಚ್ಚಲು ಅನುದಾನ ಮಂಜೂರುಗೊಳಿಸಿ. ಉಡುಪಿ, ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಲಭ್ಯವಿಲ್ಲದೇ ಇಲ್ಲಿನ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಲಾರಿ ಮಾಲಕರು ತಮ್ಮ ಲಾರಿಗಳನ್ನು ಹರಾಜಿಗಿಡುವ ದುಸ್ಥಿತಿ ಬಂದಿದೆ. ಕೆಂಪು ಕಲ್ಲು, ಮರಳಿಗೆ ಸಂಬಂಧಪಟ್ಟಂತೆ ಸರಕಾರ ಕಾನೂನಿನ ನಿಯಮದಲ್ಲಿ ಸರಳೀಕರಣಗೊಳಿಸಬೇಕು. ಕರಾವಳಿ ಭಾಗದಲ್ಲಿ ತಲೆದೋರಿರುವ 9/11 ಸಮಸ್ಯೆಯನ್ನೂ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಬೇಕೆಂದು ಸುನಿಲ್‌ ಕುಮಾರ್‌ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿಕೊಂಡರು.















































































error: Content is protected !!
Scroll to Top