ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮ
ಕಾರ್ಕಳ : ನರೇಂದ್ರ ಮೋದಿಜಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಕಾರ್ಕಳ ನಗರ ಮಹಿಳಾ ಮೋರ್ಚಾ ವತಿಯಿಂದ ಬಂಡಿಮಠ ಮೂಡು ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಧಾನಿಯವರ ಆರೋಗ್ಯಪೂರ್ಣ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಸಿಹಿತಿಂಡಿ ವಿತರಿಸಲಾಯಿತು.
ಮಹಿಳಾ ಮೋರ್ಚಾ ಬೈಲೂರು ಮಹಾ ಶಕ್ತಿಕೇಂದ್ರ ವತಿಯಿಂದ ಕಣಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆವರಣ ಸ್ವಚ್ಛತೆ ಮಾಡಲಾಯಿತು.


ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಸೇವಾ ಪಾಕ್ಷಿಕ ಸಂಚಾಲಕ ರವೀಂದ್ರ ಕುಮಾರ್, ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್, ನಗರಾಧ್ಯಕ್ಷ ನಿರಂಜನ್ ಜೈನ್, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಕಣಜಾರು ದೇವಾಸ್ಥಾನದ ಆಡಳಿತ ಮೋಕ್ತೇಸರ ಸುಧೀರ್ ಹೆಗ್ಡೆ, ಕಾರ್ಕಳ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯಾ ಡಿ. ಬಂಗೇರ, ನೀರೆ ಪಂಚಾಯತ್ ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ಸದಸ್ಯೆ ವೀಣಾ, ಕಾರ್ಕಳ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಮಮತಾ ಸುವರ್ಣ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕವಿತಾ ಹರೀಶ್, ಮಹಿಳಾ ಮೋರ್ಚಾ ತಾಲೂಕು ಉಪಾಧ್ಯಕ್ಷರುಗಳಾದ ಭಾರತಿ ಅಮೀನ್, ಆಶಾ ದೇವೇಂದ್ರ ಶೆಟ್ಟಿ, ಪಲ್ಲವಿ ಪ್ರವೀಣ್ ಹಾಗೂ ಪದಾಧಿಕಾರಿಗಳಾದ ಗೀತಾ ಕಲ್ಲೊಟ್ಟೆ ಮಮತಾ ನಾಯಕ್, ಶುಭಾ ಶೆಟ್ಟಿ, ನೀತಾ ಆಚಾರ್ಯ, ಶಿವಾನಿ ದೇವಾಡಿಗ, ರಜನಿ ಹೆಗ್ಡೆ, ಸರಿತಾ ಹಾಗೂ ಇತರರು ಉಪಸ್ಥಿತರಿದ್ದರು.




























































