ಬಾಸ್ಕೆಟ್‌ ಬಾಲ್ – ಜ್ಞಾನಸುಧಾದ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ ಬಾಲ್‌ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಪೂರ್ಣಶ್ರೀ ವಿ.ಎಸ್., ಶ್ರೇಯಾ ಹೆಮರಡ್ಡಿಸಿ ಮತ್ತು ಗ್ರೀಷ್ಮಾ ಎಸ್‌. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.









































































































error: Content is protected !!
Scroll to Top