ಮಂಗಳೂರು : ಧರ್ಮಸ್ಥಳದ ಬುರುಡೆ ಕೇಸ್ನಲ್ಲಿ ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್ಐಟಿ ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.
ನೇತ್ರಾವತಿ ನದಿ ದಡದ ಬಂಗ್ಲೆಗುಡ್ಡದಲ್ಲಿ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.
ಪಾಯಿಂಟ್ 11ರ ಆಸುಪಾಸಿನಲ್ಲಿ ಭೂಮಿಯ ಮೇಲ್ಭಾಗದಲ್ಲೇ ಮಾನವನ ಮೂಳೆಗಳು ಪತ್ತೆಯಾಗಿವೆ. ಮೂಳೆ ಪತ್ತೆಯಾದ ಸ್ಥಳದಲ್ಲೇ ಬಟ್ಟೆಯ ತುಂಡುಗಳೂ ಪತ್ತೆಯಾಗಿವೆ. ಮೂಳೆಗಳನ್ನು ಸಂಗ್ರಹಿಸಿ, ಮಣ್ಣಿನ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ.





























































