ಕಾರ್ಕಳ : ಕಾರು ಡಿಕ್ಕಿಯಾದ ಪರಿಣಾಮ ಪಾದಚಾರಿ ಆಸ್ಪತ್ರೆ ದಾಖಲಾದ ಘಟನೆ ಸೆ. 16ರಂದು ನೀರೆ ಗ್ರಾಮದಲ್ಲಿ ಸಂಭವಿಸಿದೆ. ಬೊಗ್ಗು ಎಂಬವರು ನೀರೆ ಗ್ರಾಮದ ಪಳ್ಳಿ ಕ್ರಾಸ್‌ನಲ್ಲಿ ಬೈಲೂರು ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಲೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಬೊಗ್ಗು ಅವರು ಗಾಯಗೊಂಡಿದ್ದು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯರು ಹಾಗೂ ಗುದ್ದಿದ ಕಾರಿನ ಚಾಲಕ ಬೈಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಡಿಕ್ಕಿ – ಪಾದಚಾರಿ ಆಸ್ಪತ್ರೆ ದಾಖಲು







































