ಮಣ್ಣಿನ ಮಡಿಕೆ ಉಪಯೋಗ ಆರೋಗ್ಯದೊಂದಿಗೆ ಆರ್ಥಿಕ ಪ್ರಗತಿಗೆ ಉತ್ತೇಜನ – ನವೀನ್‌ ನಾಯಕ್‌

ಕಾರ್ಕಳ : ಹಿರಿಯರು ಸಾಂಪ್ರದಾಯಿಕ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುತ್ತಿದ್ದರು. ಇದರಿಂದ ಆರೋಗ್ಯ ಮಾತ್ರವಲ್ಲದೇ ಗ್ರಾಮೀಣ ಭಾಗದ ಆರ್ಥಿಕತೆಗೆ ಪ್ರೋತ್ಸಾಹ ಸಿಗುತ್ತಿತ್ತು ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಅಭಿಪ್ರಾಯಪಟ್ಟರು.
ಅವರು ಕಾರ್ಕಳ ತಾಲೂಕು ಬಿಜೆಪಿ ಮಹಿಳಾ ಮೋರ್ಚಾದಿಂದ ಸೆ. 23ರಂದು ಕಡಾರಿಯಲ್ಲಿ ಸೇವಾ ಪಾಕ್ಷಿಕದ ಪ್ರಯುಕ್ತ ನಡೆದ ಸ್ಥಳೀಯ ಕುಶಲಕರ್ಮಿಗಳನ್ನು ಸನ್ಮಾನಿಸಿ ಮಾತನಾಡಿದರು.
ಸೇವಾಪಾಕ್ಷಿಕದ ಸಂಚಾಲಕ ರವೀಂದ್ರ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಕುಶಲಕರ್ಮಿಗಳನ್ನು ಗುರುತಿಸಿ, ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿಕೊಡುವುದರಿಂದ ಪ್ರಧಾನಿ ಮೋದಿಜಿ ಅವರ ಆತ್ಮನಿರ್ಭರ ಭಾರತ ಕನಸು ಸಾಕಾರಗೊಳ್ಳುತ್ತದೆ ಎಂದರು. ಬಳಿಕ ಐವತ್ತು ವರ್ಷಗಳಿಂದ ಕುಂಬಾರಿಕೆ ವೃತ್ತಿಯಲ್ಲಿ ತೊಡಗಿರುವ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಕಡಾರಿ ಬೊಗ್ಗು (ಅಣ್ಣು)ಮೂಲ್ಯ ಅವರನ್ನು ಗೌರವಿಸಲಾಯಿತು.
ಮಹಿಳಾ ಮೋರ್ಚಾ ಅಧ್ಯಕ್ಷೆ ವಿನಯಾ ಡಿ. ಬಂಗೇರ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕವಿತಾ ಹರೀಶ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಸುಮಾ ರವಿಕಾಂತ್, ವಿನುತಾ ಆಚಾರ್ಯ, ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ರಜತ್ ರಾಮ್, ಮಹಿಳಾ ಮೋರ್ಚಾ ನಗರ ಶಕ್ತಿಕೇಂದ್ರ ಅಧ್ಯಕ್ಷೆ ಮಮತಾ ಸುವರ್ಣ, ಪ್ರಧಾನ ಕಾರ್ಯದರ್ಶಿ ಗೀತಾ ಶೆಟ್ಟಿಗಾರ್, ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೃತಿ ಅಧಿಕಾರಿ, ಮಾಳ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿಮಲ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ಮಾಲತಿ ನಾಯ್ಕ್, ಸರಸ್ವತಿ ಆಚಾರ್ಯ, ಸುಂದರಿ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಚಿತ್ರಾ, ಶುಭ ಜಗದೀಶ್, ಹರಿಣಿ, ಕುಶಲ, ಮತ್ತಿತರರು ಉಪಸ್ಥಿತರಿದ್ದರು.































































































error: Content is protected !!
Scroll to Top