ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.
ಮೈಸೂರು ದಸರಾ ಆಚರಣೆ : ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ
























