ಪಿಇಎಸ್​ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರು : ಆದಾಯ ಮೀರಿ ಅಕ್ರಮ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್​ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ. ಇಂದು ಬೆಳಗ್ಗೆ ಬೆಂಗಳೂರಿನ ಕಾಲೇಜುಗಳು ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ಕಾಲೇಜಿನ ಮಾಲೀಕರು, ಆಡಳಿತ ಮಂಡಳಿಯವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು, ಎಲೆಕ್ಟ್ರಾನಿಕ್ ಸಿಟಿ ಕಾಲೇಜ್, ಹನುಮಂತನಗರ ಕಾಲೇಜ್, ಆಂಧ್ರದ ಕುಪ್ಪಂ ಕಾಲೇಜ್ ಸೇರಿದಂತೆ ಚೆನ್ನೈ , ಮಂಗಳೂರು, ಆಂಧ್ರ ಪ್ರದೇಶಗಳಿಂದ ಸುಮಾರು 100 ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

















































error: Content is protected !!
Scroll to Top