ಹಿರಿಯ ಸಾಹಿತಿ ಎಸ್.‌ ಎಲ್‌. ಭೈರಪ್ಪ ಅಸ್ತಂಗತ

ಬೆಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ ಎಸ್‌. ಎಲ್‌. ಭೈರಪ್ಪ (94) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸೆ. 24ರಂದು ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ತನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ, ವಂಶವೃಕ್ಷ, ದಾಟು, ತಂತು ಸೇರಿದಂತೆ ಅನೇಕ ಕಾದಂಬರಿಗಳನ್ನು ರಚಿಸಿದ್ದ ಭೈರಪ್ಪನವರು ಸರಸ್ವತಿ ಸಮ್ಮಾನ್, ಪದ್ಮಭೂಷಣ ಸೇರಿದಂತೆ ಸಾಹಿತ್ಯ ಕೃಷಿಗೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು.

1931 ಆ. 20 ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ ಲಿಂಗಣ್ಣಯ್ಯ ಮತ್ತು ಗೌರಮ್ಮ ದಂಪತಿಗಳ ಪುತ್ರನಾಗಿ ಜನಿಸಿದ್ದರು. ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ ಪೂರೈಸಿ ಅನಂತರ ಮೈಸೂರಿಗೆ ಬಂದು ಶಾರದಾ ವಿಲಾಸ ಪ್ರೌಢಶಾಲೆಯಲ್ಲಿ ಓದಿದರು. ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದರು.

ವೃತ್ತಿ ಜೀವನ
ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರಾಗಿ (1958-60) ಕಾರ್ಯನಿರ್ವಹಿಸಿದ್ದರು. ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕರಾಗಿ (1967-1971) ಬಳಿಕ ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿಗೆ ವರ್ಗವಾಗಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ 1991ರಲ್ಲಿ ನಿವೃತ್ತರಾಗಿದ್ದರು.































































































error: Content is protected !!
Scroll to Top