ಸ್ಕೂಟಿಗೆ ಕಾರು ಡಿಕ್ಕಿ – ಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಸ್ಕೂಟಿಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಆಸ್ಪತ್ರೆ ದಾಖಲಾದ ಘಟನೆ ಸೆ. 22ರಂದು ಸಂಭವಿಸಿದೆ. ನಿಟ್ಟೆ ಗ್ರಾಮದ ಸತೀಶ್‌ ಕುಮಾರ್‌ ಸ್ಕೂಟಿಯಲ್ಲಿ ಆನೆಕೆರೆ ಕಡೆಯಿಂದ ಕಾರ್ಕಳ ಸರಕಾರಿ ಆಸ್ಪತ್ರೆಯ ಮಾರ್ಗವಾಗಿ ಕಾರ್ಕಳ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿರುವಾಗ ಆಸ್ಪತ್ರೆಯ ಬಳಿ ಅವರ ಹಿಂದುಗಡೆಯಿಂದ ಅರ್ಜುನ್‌ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಸತೀಶ್‌ ಕುಮಾರ್ ಸ್ಕೂಟಿ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಸ್ಥಳದಲ್ಲಿ ಸೇರಿದ್ದ ಜನರು ಚಿಕಿತ್ಸೆಗಾಗಿ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

















































error: Content is protected !!
Scroll to Top