ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅ. 1ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಗದಗದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


























