ಉಡುಪಿ : ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ಇವರ ನೇತೃತ್ವದಲ್ಲಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದ ಸೌತ್ ಜೋನ್ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಅನುರಾಗ್ ಜಿ. ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅನುರಾಗ್ ಅವರು ಕಾರ್ಕಳ ಬಿಎಸ್‌ಎನ್‌ಎಲ್ ಉದ್ಯೋಗಿ ಗುರುರಾಜ್ ಟಿ.ಟಿ. ಹಾಗೂ ರಮಣಿ ದಂಪತಿ ಪುತ್ರ. ಶಾಲಿನಿ ರಾಜೇಶ್ ಶೆಟ್ಟಿ ಅವರಿಂದ ತರಬೇತಿ ಪಡೆದಿರುತ್ತಾರೆ.
ಸೌತ್ ಜೋನ್ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ – ಅನುರಾಗ್ ಜಿ.ಗೆ ಚಿನ್ನ




















