ಮಣಿಪಾಲ: ಶ್ರಮಯೇವ ಜಯತೇ ಎನ್ನುವ ಧ್ಯೇಯದೊಂದಿಗೆ ದೇಶದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಸಂಘಟನೆ ಎನ್.ಎಸ್.ಎಸ್. ಆಗಿದೆ. ಇಂತಹ ಸುಭದ್ರ ತಳಹದಿಯ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುವ ಎನ್‌ಎಸ್‌ಎಸ್ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ ಎಂದು ನಿಕಟಪೂರ್ವ ಎನ್.ಎಸ್.ಎಸ್. ಅಧಿಕಾರಿ ಡಾ. ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟರು.
ಅವರು ಸೆ. 27ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಹೊಸ ಘಟಕ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು ವಿಭಾಗದ ಎನ್.ಎಸ್.ಎಸ್. ವಿಭಾಗಾಧಿಕಾರಿ ಸವಿತಾ ಎರ್ಮಾಳ್, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ಎನ್.ಎಸ್.ಎಸ್. ರಾಜ್ಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ ಸಮಿಯ ಹೆಗ್ಡೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸತ್ಪ್ರಜೆಗಳಾಗಿ ಸಮಾಜ ಆಸ್ತಿಯಾಗಿ ಮೂಡಿ ಬರಬೇಕು ಎಂದರು. ಎನ್.ಎಸ್.ಎಸ್. ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಇದೇ ಸಂದರ್ಧದಲ್ಲಿ ಬಹುಮಾನ ವಿತರಿಸಲಾಯಿತು. ಅಜೆಕಾರ್ ಪದ್ಮಾಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಎನ್.ಎಸ್.ಎಸ್., ಉಪಪ್ರಾಂಶುಪಾಲ ಹೇಮಂತ್, ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಪ್ರೀತ್ ಹಾಗೂ ಸಿಂಚನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ರವಿ ಜಿ. ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ನಿರೂಪಿಸಿ, ವಂದಿಸಿದರು.
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಎನ್.ಎಸ್.ಎಸ್. ಸಹಕಾರಿ : ಡಾ. ಗಣನಾಥ ಎಕ್ಕಾರ್
















