ಉಡುಪಿ : ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ (ಸೈಫ್) ಹತ್ಯೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಬಡಗಬೆಟ್ಟು ಮಿಷನ್ ಕೌಂಪಾಂಡ್‌ನ ಮಹಮದ್ ಫೈಸಲ್ ಖಾನ್ (27), ಉಡುಪಿ ಕರಂಬಳ್ಳಿಯ ಮೊಹಮದ್ ಶರೀಫ್ (37), ಮಂಗಳೂರು ಕಾಟಿಪಳ್ಳದ ಅಬ್ದುಲ್ ಶುಕುರ್ (43) ನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಉಡುಪಿ ಪೊಲೀಸ್ ಉಪಾಧೀಕ್ಷಕ ಡಿ.ಟಿ. ಪ್ರಭು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ರಚನೆಯಾದ ತಂಡ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಸೆ. 27ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರ ಎಂಬಲ್ಲಿ ಮಾರಕಾಸ್ತ್ರಗಳಿಂದ ಕಡಿದು ಸೈಫುದ್ಧೀನ್‌ನನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಭೇದಿಸಿದ ಪೊಲೀಸರು ಒಂದೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸೈಫುದ್ಧೀನ್ ಕೊಲೆ ಪ್ರಕರಣ – ಮೂವರ ಬಂಧನ







































