ಬೆಂಗಳೂರು : ಭಾರೀ ಮಳೆಯ ಪರಿಣಾಮ ಭೀಮಾ, ಕೃಷ್ಣಾ ನದಿ ಉಕ್ಕಿ ಹರಿದಿದ್ದು, ಪರಿಣಾಮ ಪ್ರವಾಹದಿಂದಾಗಿ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಮುಖ್ಯಮಂತ್ರಿಗಳು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ : ವೈಮಾನಿಕ ಸಮೀಕ್ಷೆಯೊಂದಿಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ





