ಫಿಲಿಪೈನ್ಸ್​ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

ಮನಿಲಾ : ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಮಂಗಳವಾರ ತಡರಾತ್ರಿ 6.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮನೆಗಳು ಮತ್ತು ಕಟ್ಟಡಗಳ ಗೋಡೆಗಳು ಕುಸಿದು ಕನಿಷ್ಠ 31 ಜನರು ಮೃತಪಟ್ಟಿದ್ದಾರೆ, ಅನೇಕರು ಗಾಯಗೊಂಡಿದ್ದಾರೆ.

ಐದು ಕಿಲೋಮೀಟರ್ ಆಳದಲ್ಲಿ ಭೂಕಂಪವಾಗಿದೆ. ಸೆಬು ಪ್ರಾಂತ್ಯದಲ್ಲಿ ಸುಮಾರು 90,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾದ ಬೊಗೊದಿಂದ ಸುಮಾರು 19 ಕಿಲೋಮೀಟರ್ ಈಶಾನ್ಯಕ್ಕೆ ಇದರ ಪರಿಣಾಮ ತಟ್ಟಿದೆ.

ಬೊಗೊದಲ್ಲಿ ಕನಿಷ್ಠ 14 ನಿವಾಸಿಗಳು ಸಾವನ್ನಪ್ಪಿದ್ದಾರೆ. ಭೂಕುಸಿತದಿಂದಾಗಿ ಅನೇಕರು ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬೊಗೊದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಭೂಕಂಪದ ತೀವ್ರತೆಗೆ ಸಾಕಷ್ಟು ಹಾನಿಯಾಗಿದೆ. ಈ ಪ್ರದೇಶದಲ್ಲಿ ಸಂಚಾರವೂ ಕಷ್ಟಕರವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೊಗೊ ಬಳಿಯ ಮೆಡೆಲಿನ್ ಪಟ್ಟಣದಲ್ಲಿ ಮನೆಗಳ ಛಾವಣಿಗಳು ಮತ್ತು ಗೋಡೆಗಳು ಬಿದ್ದು 12 ಸಾವನ್ನಪ್ಪಿದ್ದಾರೆ. ಕೆಲವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.



















error: Content is protected !!
Scroll to Top