ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ನಿನ್ನೆ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.









