ರೆಪೊ ದರ ಯಥಾಸ್ಥಿತಿಯಲ್ಲಿ ಮುಂದುವರಿಕೆ

ದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು 5.5% ಯಥಾಸ್ಥಿತಿಯಲ್ಲಿ ಮುಂದುವರಿಕೆಗೆ ನಿರ್ಧರಿಸಿದೆ. ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿಯ (MPC) ಮೂರು ದಿನಗಳ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಮುಂದುವರಿಸಲು ನಿರ್ಧರಿಸಲಾಗಿದೆ.

ಆರ್ಥಿಕ ಪರಿಸ್ಥಿತಿಗಳು ಮತ್ತು ಭವಿಷ್ಯದ ಸ್ಥಿತಿಗತಿಗಳ ಪರಿಶೀಲನೆಯ ನಂತರ ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು 5.5% ಯಥಾಸ್ಥಿತಿಯಲ್ಲಿ ಮುಂದುವರಿಸಲು ಸರ್ವಾನುಮತದಿಂದ ತೀರ್ಮಾನಿಸಿದೆ. ಇದರಿಂದಾಗಿ ಎಸ್‌ಡಿಎಫ್‌ ದರವು 5.25%, MSF ದರ ಮತ್ತು ಬ್ಯಾಂಕ್ ದರ 5.75% ದಲ್ಲಿಯೇ ಮುಂದುವರಿಯಲಿದೆ.















error: Content is protected !!
Scroll to Top