ಮಣಿಪಾಲ : ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜು ವಿದ್ಯಾ ನಗರ ಇಲ್ಲಿ ಅ.2ರಂದು ಶಾರದ ಪೂಜೆ ನಡೆಯಿತು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಭಕ್ತಿ ಸುಧೆಯ ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪ ಪ್ರಾಂಶುಪಾಲ ರವಿ ಜಿ., ಹೇಮಂತ್, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಉಪಪ್ರಾಂಶುಪಾಲ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.






















