ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಗ್ರಾಮಾಂತರ ಹಾಗೂ ಸಂತ ಕ್ಲಾರೆಟ್ ಪದವಿ ಪೂರ್ವ ಕಾಲೇಜು ಜಾಲಹಳ್ಳಿ ಜಂಟಿ ಆಶ್ರಯದಲ್ಲಿ ಜರುಗಿದ ರಾಜ್ಯಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಕು. ಗ್ರೀಷ್ಮಾ ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಮೂಲಕ ಮುಂಬರುವ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಡಾ. ಕೆ. ಸತೀಶ್ ಹಾಗೂ ಚೈತ್ರಾ ದಂಪತಿಗಳ ಪುತ್ರಿ.
ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಟ್ರಸ್ಟ್‌ ಆಡಳಿತ ಮಂಡಳಿ ಅಭಿನಂದಿಸಿದೆ.































































































error: Content is protected !!
Scroll to Top