ನಿರೀಕ್ಷಿತ ವೇಗದಲ್ಲಿ ನಡೆಯದ ಸಮೀಕ್ಷೆ – ಅ. 18ರವರೆಗೆ ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ

ಬೆಂಗಳೂರು : ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಿರೀಕ್ಷಿತ ವೇಗದಲ್ಲಿ ನಡೆಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಅ. 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಸರಕಾರ ತೀರ್ಮಾನಿಸಿದೆ. ಹೀಗಾಗಿ ಅ. 18ರವರೆಗೆ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಅ. 12ರಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯಿತಿ ನೀಡಲಾಗಿದೆ ಎಂದವರು ತಿಳಿಸಿದರು.

20 ಲಕ್ಷ ರೂ. ಘೋಷಣೆ
ಗಣತಿ ವೇಳೆ ಮೃತಪಟ್ಟ ಮೂವರು ಗಣತಿದಾರರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.









































































































error: Content is protected !!
Scroll to Top