ಉಡುಪಿ : ಉಡುಪಿ ಆರ್‌ಟಿಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಮನೆ ಮೇಲೆ ಅ. 14ರಂದು ಬೆಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್‌ನಲ್ಲಿರುವ ಮನೆಗೆ ಹಾಗೂ ಆರ್‌ಟಿಓ ಕಚೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಲಕ್ಷ್ಮೀ ನಾರಾಯಣ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದಾರೆ. ಕುಮುಟಾ ಹಾಗೂ ಪಡುಅಲೆವೂರುನಲ್ಲಿರುವ ಸಂಬಂಧಿಕರ ಮನೆ ಮತ್ತು ಆರ್‌ಟಿಓ ಬ್ರೋಕರ್ ಪಡು ಅಲೆವೂರು ನಿವಾಸಿ ರವಿ ಮನೆಗೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
























