ಆರೆಸ್ಸೆಸ್ ಚಟುವಟಿಕೆಗಳನ್ನು ಪ್ರಶ್ನಿಸಿದ್ದರಿಂದ ನಿರಂತರ ಬೆದರಿಕೆ ಕರೆ – ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಕಳೆದ ಎರಡು ದಿನಗಳಿಂದ ನನ್ನ ಫೋನ್ ನಿರಂತರವಾಗಿ ರಿಂಗ್‌ ಆಗುತ್ತಿದೆ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ನಡೆಯುತ್ತಿರುವ ಆರೆಸ್ಸೆಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಅತ್ಯಂತ ನಿಂದನಾತ್ಮಕ ಮತ್ತು ಬೆದರಿಕೆ ಕರೆಗಳು ತುಂಬಿಹೋಗಿವೆ. ನನಗೆ ಇದರಲ್ಲಿ ಯಾವುದೇ ಆಶ್ಚರ್ಯವಿಲ್ಲ, ನಾನು ಇದರಿಂದ ವಿಚಲಿತನಾಗುವುದೂ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸರಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂಗೆ ಪತ್ರ ಬರೆದ ಹಿನ್ನೆಲೆಯಲ್ಲಿ ತಮಗೆ ಬರುತ್ತಿರುವ ಕರೆಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮಹಾತ್ಮ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಬಿಡದ ಆರೆಸ್ಸೆಸ್ಸಿಗರು ನನ್ನನ್ನು ಬಿಡುವರೇ? ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳು ನನ್ನನ್ನು ಮೌನಗೊಳಿಸುತ್ತವೆ ಎಂದು ಅವರು ಭಾವಿಸಿದರೆ, ಅದು ಕೇವಲ ಅವರ ಭ್ರಮೆ. ಇದೊಂದು ಪ್ರಾರಂಭ ಮಾತ್ರ ಎಂದು ತಿಳಿಸಿದ್ದಾರೆ.

ಇದು ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಗಳ ಆಧಾರದ ಮೇಲೆ ಸಮಾನತೆ, ಯುಕ್ತಿಚಿಂತನೆ ಮತ್ತು ಕರುಣೆಯ ಮೌಲ್ಯಗಳಲ್ಲಿ ಸ್ಥಾಪಿತವಾದ ಹೊಸ ಸಮಾಜವನ್ನು ನಿರ್ಮಿಸುವ ಸಮಯ. ಈ ದೇಶವನ್ನು ಅತ್ಯಂತ ಅಪಾಯಕಾರಿ ವೈರಸ್‌ಗಳಿಂದ ಶುದ್ಧೀಕರಿಸುವ ಸಂಕಲ್ಪ ಮಾಡಬೇಕಾದ ಕ್ಷಣ ಎಂದು ಬರೆದಿದ್ದಾರೆ.







































































error: Content is protected !!
Scroll to Top