ಬೆಳ್ತಂಗಡಿ: ಜಯಂತ್ ಟಿ. ವಿರುದ್ಧ ಸುಮೊಟೊ ಕೇಸು ದಾಖಲು

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಅ.14ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ಆಯುಕ್ತ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶದ ವಿರುದ್ಧ ಜನರನ್ನು ಪ್ರಚೋದಿಸಲು ಬಂಟ್ವಾಳ ಡಿವೈಎಸ್ಪಿ ಮತ್ತು ಪುತ್ತೂರು ಎಸಿ ಬಗ್ಗೆ ಜಯಂತ್ ಟಿ. ತಪ್ಪು ಮಾಹಿತಿಯನ್ನು ವಿಡಿಯೋ ಮಾಡಿ ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.













































































error: Content is protected !!
Scroll to Top