ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ. 18ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಂಜೆ ವೇಳೆಗೆ ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.











































































error: Content is protected !!
Scroll to Top