ನಿಲ್ಲಿಸಿದ್ದ ಲಾರಿಗೆ ಬೈಕ್‌ ಡಿಕ್ಕಿ – ಸವಾರನಿಗೆ ಗಾಯ

ಕಾರ್ಕಳ : ನಿಲ್ಲಿಸಿದ್ದ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಅ. 16ರಂದು ನಿಟ್ಟೆ ಗ್ರಾಮದಲ್ಲಿ ಸಂಭವಿಸಿದೆ. ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ಬಳಿ ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಯಾವುದೇ ಮುನ್ಸೂಚನಾ ಫಲಕ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯತನದಿಂದ ನಿಲ್ಲಿಸಿದ್ದ ಲಾರಿಯ ಹಿಂಬದಿಗೆ ವಿಜಯ ಎಂಬುವವರು ಸವಾರಿ ಮಾಡಿಕೊಂಡು ಬರುತ್ತಿದ್ದ ಬೈಕ್‌ ಡಿಕ್ಕಿಯಾಗಿದೆ. ಪರಿಣಾಮವಾಗಿ ವಿಜಯ ಅವರು ಗಾಯಗೊಂಡಿರುತ್ತಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.























































































































error: Content is protected !!
Scroll to Top