ಅಭಿಷೇಕ್‌ ಆತ್ಮಹತ್ಯೆ ಪ್ರಕರಣ – ಡೆತ್‌ನೋಟ್‌ನಲ್ಲಿ ಹೆಸರಿದ್ದ ನಿರೀಕ್ಷಾ ಬಂಧನ

ಕಾರ್ಕಳ : ನಿಟ್ಟೆ ಗ್ರಾಮದ ಯುವಕ ಅಭಿಷೇಕ್ ಬೆಳ್ಮಣ್ಣಿನ ಲಾಡ್ಜ್‌ ಒಂದರಲ್ಲಿ ಇತ್ತೀಚೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಆತ ಏಳು ಪುಟಗಳ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ಕಾರಣರಾದವರು ನಿರೀಕ್ಷಾ, ರಾಕೇಶ್, ರಾಹುಲ್ ಹಾಗೂ ತಸ್ಲೀಮ್ ಎಂದು ಹೆಸರು ಬರೆದಿದ್ದ.

ಅಭಿಷೇಕ್‌ ಮಂಗಳೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ಮೆಡಿಕಲ್ ಸಲಕರಣೆಗಳ ಸರ್ವಿಸಿಂಗ್ ಕೆಲಸ ಮಾಡುತ್ತಿದ್ದ. ಇಲ್ಲಿನ ವಾರ್ಡ್‌ ನರ್ಸ್‌ ಆಗಿದ್ದ ತಾನು ಪ್ರೀತಿಸುತ್ತಿದ್ದ ಹುಡುಗಿ ನಿರೀಕ್ಷಾ ಮೊದಲು ತನ್ನನ್ನು ಪ್ರೇಮಿಸುವಂತೆ ನಾಟಕವಾಡಿ ನಂತರ ತನ್ನ ಅಶ್ಲೀಲ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾಳೆ. ಈಕೆ ಮತ್ತು ಈಕೆಯ ತಂಡ, ತನ್ನಿಂದ 4 ಲಕ್ಷ ರೂ.ಗೂ ಅಧಿಕ ಹಣ ಪಡೆದು ಇನ್ನಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದರಿಂದ ರೋಸಿ ಹೋಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್​​ ನೋಟಿನಲ್ಲಿ ಉಲ್ಲೇಖಿಸಿದ್ದ.

ಡೆತ್‌ನೋಟ್‌ ವೈರಲ್‌ ಆಗುತ್ತಿದ್ದಂತೆ ನಿರೀಕ್ಷಾ ಕುರಿತಾಗಿ ಕೆಲವು ಅಶ್ಲೀಲ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಲ್ಲದೆ, ಯುವತಿಯೊಬ್ಬಳು ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ನಿರೀಕ್ಷಾ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅ.19 ರಂದು ಕದ್ರಿ ಪೊಲೀಸರು ನಿರೀಕ್ಷಾಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

















































error: Content is protected !!
Scroll to Top