ಸ್ಕೂಟರ್‌ಗೆ ಕಾರು ಡಿಕ್ಕಿ – ಎಎಸ್‌ಐ ಪುತ್ರಿ ಮೃತ್ಯು

ಉಡುಪಿ : ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪೋ ಬಳಿ ಅ. 26ರಂದು ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಶಿರ್ವ ಠಾಣೆಯ ಎಎಸ್‌ಐ ಸುದೇಶ್ ಶೆಟ್ಟಿ ಅವರ ಪುತ್ರಿ ಎಂಬಿಎ ವಿದ್ಯಾರ್ಥಿನಿ ಸ್ಪರ್ಶಾ (24) ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಮೃತರ ತಾಯಿ ಶರ್ಮಿಳಾ (49) ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ರಾತ್ರಿ ಉಡುಪಿ -ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಚಾಲಕ ರಾಕೇಶ್ ಎಂಬಾತ ಕರಾವಳಿ ಕಡೆಯಿಂದ ಸಂತೆಕಟ್ಟೆ ಕಡೆಗೆ ವೇಗದಲ್ಲಿ ಚಲಾಯಿಸಿಕೊಂಡು ಬಂದು ಸ್ಪರ್ಶಾಳ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದನು. ಪರಿಣಾಮ ಸ್ಕೂಟರ್‌ನಲ್ಲಿದ್ದ ಶರ್ಮಿಳಾ ಹಾಗೂ ಸ್ಪರ್ಶಾ ಅವರಿಗೆ ಗಾಯವಾಗಿದ್ದು ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.



































































































error: Content is protected !!
Scroll to Top