ಬೈಲೂರು ಮೈನ್ ಶಾಲೆ – ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್‌ನಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಅ. 24ರಂದು ನಡೆಯಿತು.
ಶಾಲೆಯು 1920 ಜೂ. 1ರಂದು ಪ್ರಾರಂಭಗೊಂಡಿದ್ದು, 105 ವರ್ಷಗಳ ಇತಿಹಾಸವನ್ನು ಹೊಂದಿದೆ. ನೂತನ ಹಳೆವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕೌಡೂರು ನಾಯರ್‌ ಬೆಟ್ಟು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೆ. ಆರ್.‌ ಸುಧೀರ್‌ ಹೆಗ್ಡೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಕೊಡವೂರು, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.































































































error: Content is protected !!
Scroll to Top