ಬ್ಯಾರಿಕೇಡ್‌ಗೆ ಬೈಕ್‌ ಡಿಕ್ಕಿ – ಚಿಕಿತ್ಸೆ ಫಲಿಸದೆ ಸವಾರ ಸಾವು

ಕಾರ್ಕಳ : ಬ್ಯಾರಿಕೇಡ್‌ಗೆ ಬೈಕ್‌ ಡಿಕ್ಕಿಯಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಅ. 27ರಂದು ಮುದ್ರಾಡಿಯಲ್ಲಿ ಸಂಭವಿಸಿದೆ. ಹರೀಶ್‌ (45) ಮೃತ ವ್ಯಕ್ತಿ. ಅವರು ಅ. 25ರಂದು ಬೈಕ್‌ನಲ್ಲಿ ಬಚ್ಚಪ್ಪು ಕಡೆಯಿಂದ ಮುದ್ರಾಡಿ ಕಡೆಗೆ ಸಾಗುತ್ತಿದ್ದಾಗ ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡ ಭಾಗಕ್ಕೆ ಚಲಾಯಿಸಿಕೊಂಡು ಹೋಗಿ ಮುದ್ರಾಡಿ ರಿಕ್ಷಾ ನಿಲ್ದಾಣದ ಮುಂಭಾಗ ರಸ್ತೆ ಬದಿಯಲ್ಲಿ ಇರಿಸಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ತಲೆಯ ಹಿಂಭಾಗಕ್ಕೆ ಗಾಯವಾಗಿರುತ್ತದೆ. ಚಿಕಿತ್ಸೆಗಾಗಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಂತರ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹರೀಶ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಅ. 27ರಂದು ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





























































































































error: Content is protected !!
Scroll to Top