ಕಾರ್ಕಳ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಪ್ರಕರಣ ಸಂಬಂಧಿಸಿದಂತೆ ಸಾರ್ವಜನಿಕರು ಎಸ್.ಕೆ. ಬಾರ್ಡರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಹರೀಶ್ (44) ಮತ್ತು ಉಮೇಶ್ (40) ಎಂಬ ಇಬ್ಬರು ಮೃತ ಪಟ್ಟಿದ್ದಾರೆ. ಇಬ್ಬರು ಸೇರಿ ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದರು. ಈ ವೇಳೆ ಆನೆ ದಾಳಿ ನಡೆಸಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಪ್ರಕರಣ ಸಂಬಂಧಿಸಿದಂತೆ ರೊಚ್ಚಿಗೆದ್ದಿರುವ ಸಾರ್ವಜನಿಕರು ಎಸ್‌ಕೆ ಬಾರ್ಡರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಬರಬೇಕೆಂದು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆಯಿಂದಾಗಿ ಕಾರ್ಕಳ ಮಂಗಳೂರು ಸಂಚಾರ ಅಸ್ತವ್ಯಸ್ತವಾಗಿದ್ದು ಯಾವುದೇ ವಾಹನ ಸಂಚಾರ ಇರಲಿಲ್ಲ. ಡಿಸಿ, ಎಸ್‌ಪಿ, ಸಿಸಿಎಫ್, ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಮಂಗಳೂರು ಸಿಸಿಎಫ್ ಕರಿಕಾಲನ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್‌ಒ ಶಿವರಾಮ ಬಾಬು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೊಕ್ಕಾಂ ಹೂಡಿದ್ದಾರೆ.























