ಬೆಂಗಳೂರು : ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ–ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆಯೂ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ : ರಾಜ್ಯ ಸರ್ಕಾರ






























































