ಕಾರ್ಕಳ : ಸ. ಹಿ. ಪ್ರಾ. ಶಾಲೆ ಕಲಗುಪ್ಪೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ತಾಯಿ ಭುವನೇಶ್ವರಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಗಣೇಶ್ ಸಾಲಿಯನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜಿತ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುಮಿತ್ರಾ ಇಡ್ಯಾ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ದೀಪ್ತಿ ದಿನೇಶ್ ಕಾಜರ್ ಬೈಲು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮನೋಹರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಕ್ಕಳಿಂದ ಭಾಷಣ, ಹಾಡು ಇತ್ಯಾದಿ ಕಾರ್ಯಕ್ರಮ ನಡೆಯಿತು. ಸಹ ಶಿಕ್ಷಕಿ ಸುನಂದ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಅಶ್ವಿನಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು.
ಕಲ್ಲಗುಪ್ಪೆ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ
































































