ಬೆಂಗಳೂರು : ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ 11 ಗಂಟೆಗೆ ನಿಧನರಾಗಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಉಡುಪಿ ಮೂಲದವರಾದ ಹರೀಶ್ ರಾಯ್ ಮುಂಬಯಿಯಲ್ಲಿ ಬೆಳೆದಿದ್ದರು. ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ತೊಡಗಿಕೊಂಡಿದ್ದ ಅವರು ಸ್ಯಾಂಡಲ್‌ವುಡ್‌ನ ಟಾಪ್ ಸಿನಿಮಾ ಕೆಜಿಎಫ್‌ನಲ್ಲಿ ನಟನೆಯ ಬಳಿಕ ಅವರು ಕೆಜಿಎಫ್ ಚಾಚಾ ಎಂದೇ ಖ್ಯಾತಿ ಪಡೆದಿದ್ದರು. ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಅವರ ಅಭಿನಯದ ಪ್ರಮುಖ ಸಿನಿಮಾಗಳು.

























