ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಚಿಂತನೆ

ಬೆಂಗಳೂರು : ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಸದ್ಯ 1ರಿಂದ 10ನೇ ತರಗತಿವರೆಗೂ ಇರುವ ಬಿಸಿಯೂಟವನ್ನು ಸರ್ಕಾರಿ, ಅನುದಾನ ಪಿಯು ಕಾಲೇಜುವರೆಗೂ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಮಕ್ಕಳಿಗೂ ವಿಸ್ತರಿಸಬಹುದು ಎಂದು ಶಿಕ್ಷಣ ಇಲಾಖೆ ಮೂಲಗಳು ಮಾಹಿತಿ ನೀಡಿದೆ. ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಬಗ್ಗೆ ನ.14 ಮಕ್ಕಳ ದಿನಾಚರಣೆಯಂದು ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.









































































































error: Content is protected !!
Scroll to Top