ಕಾರ್ಕಳ : ವಂದೇ ಮಾತರಂ ಗೀತೆಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಕಾರ್ಕಳ ಬಿಜೆಪಿ ವತಿಯಿಂದ ಅ. 7ರಂದು ವಿಕಾಸ ಕಚೇರಿಯಲ್ಲಿ ವಂದೇ ಮಾತರಂ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮ ನಡೆಯಿತು. ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ಮಂಡಲಾಧ್ಯಕ್ಷ ನವೀನ್ ನಾಯಕ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ್ ಹೆಗ್ಡೆ, ಯುವಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ, ಹಿಂದುಳಿದ ವರ್ಗಗಳ ಅಧ್ಯಕ್ಷ ಪ್ರಸಾದ್ ಐಸಿರ ಸೇರಿದಂತೆ ಪಕ್ಷದ ಪ್ರಮುಖರು, ಬಿಜೆಪಿ ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.
ವಂದೇ ಮಾತರಂಗೆ 150 ವರ್ಷದ ಸಂಭ್ರಮ : ಕಾರ್ಕಳ ಬಿಜೆಪಿ ವತಿಯಿಂದ ವಂದೇ ಮಾತರಂ ಗಾಯನ






















