ಬಹುಕೋಟಿ ವಂಚನೆ ಪ್ರಕರಣ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಮಂಗಳೂರು : ಉದ್ಯಮಿಗಳಿಗೆ ಸಾಲ ಕೊಡಿಸೋದಾಗಿ ಕೋಟಿ ಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ.

ರೋಷನ್ ಸಲ್ಡಾನ ಕೋಟಿಗಟ್ಟಲೆ ಸಾಲ ಕೊಡಿಸುವ ಆಮಿಷವೊಡ್ಡಿ ದೇಶದ ಐಷಾರಾಮಿ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿದ್ದ. ಈ ಸಂಬಂಧ ರೋಷನ್ ಸಲ್ಡಾನ, ಆತನ ಪತ್ನಿ ಢಫ್ನಿನೀತು ಹಾಗೂ ಇತರರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಈ ಹಿಂದೆ ಸುಮಾರು 9.5 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.

ನೂರಾರು ಕೋಟಿ ಸಾಲ ಕೊಡಿಸುವುದಾಗಿ ಐದರಿಂದ ಹತ್ತು ಕೋಟಿ ರೂ. ಮುಂಗಡ ಹಣ ಪಡೆದು ರೋಷನ್ ಸಲ್ಡಾನ ಮೋಸ ಮಾಡುತ್ತಿದ್ದ. ಈ ಸಂಬಂಧ ಇಬ್ಬರು ಉದ್ಯಮಿಗಳು ನೀಡಿದ್ದ ದೂರಿನ ಆಧಾರದಲ್ಲಿ ಕಳೆದ ಜು.17 ರಂದು ರೋಷನ್ ಸಲ್ಡಾನನನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು.































































































































































error: Content is protected !!
Scroll to Top