ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಕಾರ್ಕಳ : ಕ್ರೀಡೆಯು ಬದುಕಿನಲ್ಲಿ ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸುವವರಾಗಿ, ಸಮಾಜಮುಖಿ ವ್ಯಕ್ತಿತ್ವವಾಗಿ ರೂಪುಗೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದು ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ ಪದವಿ ಪೂರ್ವ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕೇಶ್ ಶೆಟ್ಟಿ ಹೊಸಮಠ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅರ್ನ್‌ಲರ್ನ್ ಬಿಸ್‌ನೆಸ್‌‌ಪೈರ್‌ ಉದ್ಘಾಟನೆ
ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಸಂಸ್ಥೆಯ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳೇ ಮುನ್ನಡೆಸುವ ಅರ್ನ್‌ಲರ್ನ್‌ ಬಿಸ್‌ನೆಸ್ ಪೈರನ್ನು ಸುಕೇಶ್ ಶೆಟ್ಟಿ ಹೊಸಮಠ ಉದ್ಘಾಟಿಸಿದರು. ಈ ಸಂದರ್ಭ ಅಜೆಕಾರ್ ಪದ್ಮಗೋಪಾಲ್‌ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್‌ ಜೈನ್, ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರ್, ಪಿ.ಆರ್.ಒ. ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್‌ ಯು. ಹಾಗೂ ವಾಣಿ ಕೆ., ಡೀನ್‌ ಅಕಾಡೆಮಿಕ್ಸ್ ಡಾ.ಮಿಥುನ್‌ ಯು., ಡೀನ್ ಸ್ಟೂಡೆಂಟ್‌ ಅಫೈರ್‌ ಶಕುಂತಳಾ ಸುವರ್ಣ, ವ್ಯವಹಾರ ಅಧ್ಯಯನದ ಉಪನ್ಯಾಸಕ ಶೈಲೇಶ್ ಶೆಟ್ಟಿ ಹಾಗೂ ಸಂಸ್ಥೆಯ ಹಿತೈಷಿಗಳಾದ ತ್ರಿವಿಕ್ರಮಕಿಣಿ ಮತ್ತು ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹೆಗ್ಡೆ ಸ್ವಾಗತಿಸಿ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್‌ ಕುಲಾಲ್ ಪಥಸಂಚಲನದ ಉದ್ಘೋಷಣೆಯನ್ನು ನಡೆಸಿಕೊಟ್ಟರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್‌ ಕಾರ್ಯಕ್ರಮ ನಿರೂಪಿಸಿದರು.





























































































































error: Content is protected !!
Scroll to Top