ಡಿ. 1 ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ದೆಹಲಿ : ಸಂಸತ್ ಚಳಿಗಾಲದ ಅಧಿವೇಶನ ಡಿ. 1 ರಿಂದ 19ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಎಕ್ಷ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1ರಿಂದ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಸಂಸತ್ತಿನ ಚಳಿಗಾಲದ ಅಧಿವೇಶನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೆಚ್ಚುವರಿಯಾಗಿ, ಭಾರತದ ಚುನಾವಣಾ ಆಯೋಗ ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾರಂಭಿಸಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವಿಷಯದಲ್ಲಿ ವಿರೋಧ ಪಕ್ಷಗಳು ಸರ್ಕಾರವನ್ನು ಸಿಲುಕಿಸಲು ಪ್ರಯತ್ನಿಸಬಹುದು ಎಂದು ಹೇಳಲಾಗುತ್ತಿದೆ.





























































































































error: Content is protected !!
Scroll to Top