ಮೂಡುಬಿದಿರೆ : ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಮತ್ತು ಸುಳ್ಯ ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಒಟ್ಟು 6 ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ ಆಗಿ ಆಳ್ವಾಸ್ ಹೊರಹೊಮ್ಮಿತು. ಬಾಲಕಿಯರ ಸಬ್ ಜೂನಿಯರ್ ವಿಭಾಗದಲ್ಲಿ ಮಾನಸ, ಮಹಿಳಾ ವಿಭಾಗದಲ್ಲಿ ತನುಷ ಬೆಸ್ಟ್ ಲಿಪ್ಟರ್ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಡಾ| ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಆಳ್ವಾಸ್‌ಗೆ 6 ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ








