ನ. 29 : ಕಾರ್ಕಳದಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವ

ನೆಲದ ಕಲೆ ಉಳಿಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಉತ್ಸವ – ಡಾ. ಎಂ. ಮೋಹನ ಆಳ್ವ


ಕಾರ್ಕಳ
: ನಮ್ಮ ದೇಶದ ಸಂಸ್ಕೃತಿ, ಕಲೆ ಉಳಿಸುವ ನಿಟ್ಟಿನಲ್ಲಿ ಆಳ್ವಾಸ್‌ ಸಂಸ್ಥೆಯು ನಿರಂತರವಾಗಿ ಸಾಂಸ್ಕೃತಿಕ ಉತ್ಸವ ಆಯೋಜಿಸಿಕೊಂಡು ಬಂದಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು.
ಅವರು ಹೊಟೇಲ್‌ ಪ್ರಕಾಶ್‌ನಲ್ಲಿ ನಡೆದ ಆಳ್ವಾಸ್‌ ಸಾಂಸ್ಕೃತಿಕ ವೈಭವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ 30 ವರ್ಷಗಳಿಂದ ವಿರಾಸತ್‌ ನಡೆದುಕೊಂಡು ಬಂದಿದ್ದು, ಇದೀಗ ರಾಜ್ಯದಾದ್ಯಂತ ಆಳ್ವಾಸ್‌ ನುಡಿಸಿರಿ ವಿರಾಸತ್‌ ಪ್ರದರ್ಶನಗೊಳ್ಳುತ್ತಿದೆ ಎಂದರು.

ಆಳ್ವಾಸ್‌ ನುಡಿಸಿರಿ – ವಿರಾಸತ್‌ ಕಾರ್ಕಳ ಘಟಕದ ಅಧ್ಯಕ್ಷ ವಿಜಯ ಶೆಟ್ಟಿ ಮಾತನಾಡಿ, ಸಾಹಿತ್ಯ, ಕಲೆ, ಸಂಸ್ಕೃತಿ ಬೆಳವಣಿಗೆಯಲ್ಲಿ ಆಳ್ವರ ಕೊಡುಗೆ ಅಪಾರ. ಕಾರ್ಕಳದಲ್ಲಿ ನಡೆಯುವ ಸಾಂಸ್ಕೃತಿಕ ವೈಭವ ಅತ್ಯಂತ ಸಂಭ್ರಮ, ಸಡಗರದಿಂದ ನೆರವೇರುವಂತಾಗಲಿ ಎಂದರು.
ವೇದಿಕೆಯಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್, ಶಾಂತಿನಿಕೇತನ ಚಾರಿಟೆಬಲ್‌ ಪೌಂಡೇಶನ್‌ ಅಧ್ಯಕ್ಷ ಅಶೋಕ್‌ ಅಡ್ಯಂತಾಯ, ನಿವೃತ್ತ ಪ್ರಾಂಶುಪಾಲ ಗುಣಪಾಲ್‌ ಕಡಂಬ, ಎಸ್‌ವಿಟಿ ವಿದ್ಯಾಸಂಸ್ಥೆ ಸಂಚಾಲಕ ಕೆ. ಪಿ. ಶೆಣೈ, ನಿವೃತ್ತ ಪ್ರಾಂಶುಪಾಲರಾದ ಮಿತ್ರಪ್ರಭಾ ಹೆಗ್ಡೆ ಉಪಸ್ಥಿತರಿದ್ದರು.‌ ಕಸಾಪ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಆಳ್ವಾಸ್‌ ಸಂಸ್ಥೆಯ ಎಒ ಬಾಲಕೃಷ್ಣ ಶೆಟ್ಟಿ, ಉಪನ್ಯಾಸಕರಾದ ಅಂಬರೀಶ್‌ ಚಿಪೂಳ್‌ಣ್ಕರ್‌, ಡಾ. ರುಚಿಕಾ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಸಹಕರಿಸಿದರು.









































































































error: Content is protected !!
Scroll to Top