ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ : ಆರೋಗ್ಯವಂತ ಶಿಶು ಪ್ರದರ್ಶನ – ಮಾಹಿತಿ ಕಾರ್ಯಕ್ರಮ

ಕಾರ್ಕಳ : ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕುಕ್ಕುಂದೂರು ಬಿ. ವತಿಯಿಂದ ದುರ್ಗಾಪರಮೇಶ್ವರಿ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ ನ. 19ರಂದು ನಡೆಯಿತು.
ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀ ವಿದ್ಯಾ ಎಸ್‌. ಕಿದಿಯೂರು ಆರೋಗ್ಯದ ಕುರಿತು ಮಾಹಿತಿ ನೀಡಿದರು, ಕುಕ್ಕುಂದೂರು ಗ್ರಾಮ ಪಂಚಾಯತ್ ಸದಸ್ಯರಾದ ರಾಮನಾಥ್ ನಾಯಕ್ ಮಕ್ಕಳಿಗೆ ಬಹುಮಾನ ಹಾಗೂ ಬಾಲಕೃಷ್ಣ ಶೆಟ್ಟಿ ಇವರು ಲಘು ಉಪಹಾರದ ಪ್ರಾಯೋಜಕತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಸದಸ್ಯರಾದ ರೇಖಾ ಕಾಮತ್ ಜೋಡುರಸ್ತೆ, ದುರ್ಗಾಪರಮೇಶ್ವರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿರಿದ್ದರು























































































































error: Content is protected !!
Scroll to Top