10ನೇ ಬಾರಿ ಸಿಎಂ ಆಗಿ ನಿತೀಶ್‌ ಕುಮಾರ್‌ ಅಧಿಕಾರ ಸ್ವೀಕಾರ

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ಇಂದು 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಇಂದು ಬೆಳಗ್ಗೆ 11.30ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಎನ್‌ಡಿಎ ಬಲಪ್ರದರ್ಶನದ ನಡುವೆ ನಿತೀಶ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಹಾರ ರಾಜ್ಯಪಾಲ ಆರಿಫ್ ಮೊಹ್ಮದ್ ಖಾನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇತರ ಹಲವಾರು ಕೇಂದ್ರ ಸಚಿವರು ಮತ್ತು ಎನ್‌ಡಿಎ-ಬಿಜೆಪಿ ನಾಯಕರು ಭಾಗವಹಿಸಿದ್ದರು.









































































































error: Content is protected !!
Scroll to Top