ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ ಮಣಿಪಾಲ ಹಾಗೂ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಕಹಳೆ-2025ರಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಪ್ರಜ್ಞಾ ಮೋಹನ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಜನಪದ ಗೀತಾಗಾಯನ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿಯ ಜಿ. ಅಭಿಜ್ಞಾ ಹೆಗ್ಡೆ ಪ್ರಥಮ ಸ್ಥಾನ, ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿಯ ಸಾನಿಕ ಅಮಿತ್‌ಶೆಟ್ಟಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿಯ ನಾಗಶಯನ ಜಿ.ವಿ. ಹಾಗೂ ಸುಬ್ರಮಣ್ಯ ಶೆಣೈ ತೃತೀಯ ಸ್ಥಾನವನ್ನು ದಕ್ಕಿಸಿಕೊಂಡಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಜ್ಞಾನಸುಧಾದ ಮೂವರು ಮೈಸೂರು ವಿಭಾಗೀಯ ಮಟ್ಟಕ್ಕೆ






















